ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ಸಾಮೂಹಿಕ ಮೃತ್ಯುಂಜಯ ಹೋಮ, ಲಕ್ಷ ಶಿವಪಂಚಾಕ್ಷರಿ ಮಂತ್ರ ಪಠಣ ಯಜ್ಞ

ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ 2027ರ ಫೆಬ್ರವರಿಯಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಕಾರ್ಯಕ್ರಮದ ಅಂಗವಾಗಿ ಜು.26ರಂದು ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಮೃತ್ಯುಂಜಯ ಹೋಮ ಹಾಗೂ ಭಕ್ತಾದಿಗಳಿಂದ ಲಕ್ಷ ಶಿವಪಂಚಾಕ್ಷರಿ ಮಂತ್ರ ಪಠಣ ಯಜ್ಞ ನಡೆಯಿತು. ಮೃತ್ಯುಂಜಯ ಹೋಮದೇವಾಲಯದ ತಂತ್ರಿವರ್ಯರಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ವೇದಮೂರ್ತಿ ವೆಂಕಟ್ರಮಣ ಭಟ್ ಕಾನುಮೂಲೆರವರ ನೇತೃತ್ವದಲ್ಲಿ ಬೆಳಿಗ್ಗೆ 9ರಿಂದ ಮೃತ್ಯುಂಜಯ ಹೋಮ ಆರಂಭಗೊಂಡಿತು. ಮಧ್ಯಾಹ್ನ ಮೃತ್ಯುಂಜಯ ಹೋಮದ ಪೂರ್ಣಾಹುತಿ ನಡೆದು ಸೇವಾದಾರರಿಗೆ ಸಂಕಲ್ಪ ಸಹಿತ ಪ್ರಸಾದ ವಿತರಣೆ ನಡೆಯಿತು. […]
41ನೇ ವರ್ಷದ ಬೆಟ್ಟಂಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಹಾಗೂ ಸಮಾಲೋಚನಾ ಸಭೆ

ಬೆಟ್ಟಂಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯಲಿರುವ 41ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಮತ್ತು ಸಮಾಲೋಚನಾ ಸಭೆ ಜು.19ರಂದು ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ಬಿಲ್ವಶ್ರೀ ಸಭಾಂಗಣದಲ್ಲಿ ನಡೆಯಿತು ಬೆಟ್ಟಂಪಾಡಿ ಗುತ್ತು ಮನೆಯ ಹಿರಿಯರಾದ ಚಂದ್ರಾವತಿ ರೈ ಅವರು ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡಿ ಗಣೇಶೋತ್ಸವಕ್ಕೆ ಶುಭ ಹಾರೈಸಿದರು. ಬಳಿಕ ನಡೆದ ಸಮಾಲೋಚನಾ ಸಭೆಯಲ್ಲಿ ಆಮಂತ್ರಣ ಪತ್ರವನ್ನು ಮನೆ ಮನೆಗೆ ತಲುಪಿಸುವುದು ಸೇರಿದಂತೆ ಗಣೇಶೋತ್ಸವದ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಸಮಿತಿ […]
ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಜಾತ್ರೆ

ವರ್ಷದಲ್ಲಿ ಮೊದಲ ಹಾಗೂ ಕೊನೆಯ ಜಾತ್ರೋತ್ಸವ ನಡೆಯುವ ಕ್ಷೇತ್ರ ಎಂಬ ವಿಶೇಷತೆಯನ್ನು ಹೊಂದಿರುವ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಜಾತ್ರೆಯು ಮೇ.25ರಂದು ಶ್ರದ್ಧಾಭಕ್ತಿಯಿಂದ ನೆರವೇರಿತು. ಮೇ.24ರಂದು ಬಲಿವಾಡು ಶೇಖರಣೆ ನಡೆಯಿತು. ಮೇ.25ರಂದು ಬೆಳಿಗ್ಗೆ ನವಕ ಕಲಶಾಭಿಷೇಕ, ತುಲಾಭಾರ ಸೇವೆ, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಭಜನೆ ಮತ್ತು ಮಹಾಪೂಜೆಯ ಬಳಿಕ ಶ್ರೀ ದೇವರ ಉತ್ಸವ ಬಲಿ, ಬಟ್ಟಲು ಕಾಣಿಕೆ ಹಾಗೂ ರಾಜಾಂಗಣದಲ್ಲಿ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ಜರಗಿತು. ಮಧ್ಯಾಹ್ನ ಹಾಗೂ ರಾತ್ರಿ ಸೇರಿ […]