41ನೇ ವರ್ಷದ ಬೆಟ್ಟಂಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಹಾಗೂ ಸಮಾಲೋಚನಾ ಸಭೆ

July 19, 2026
bettampady ganeshotsava 2026

ಬೆಟ್ಟಂಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯಲಿರುವ 41ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಮತ್ತು ಸಮಾಲೋಚನಾ ಸಭೆ ಜು.19ರಂದು ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ಬಿಲ್ವಶ್ರೀ ಸಭಾಂಗಣದಲ್ಲಿ ನಡೆಯಿತು

ಬೆಟ್ಟಂಪಾಡಿ ಗುತ್ತು ಮನೆಯ ಹಿರಿಯರಾದ ಚಂದ್ರಾವತಿ ರೈ ಅವರು ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡಿ ಗಣೇಶೋತ್ಸವಕ್ಕೆ ಶುಭ ಹಾರೈಸಿದರು. ಬಳಿಕ ನಡೆದ ಸಮಾಲೋಚನಾ ಸಭೆಯಲ್ಲಿ ಆಮಂತ್ರಣ ಪತ್ರವನ್ನು ಮನೆ ಮನೆಗೆ ತಲುಪಿಸುವುದು ಸೇರಿದಂತೆ ಗಣೇಶೋತ್ಸವದ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರು ತಮ್ಮ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ಬೆಟ್ಟಂಪಾಡಿ ಬೀಡು, ಮೊಕ್ತೇಸರ ವಿನೋದ್ ಕುಮಾರ್ ರೈ ಬೆಟ್ಟಂಪಾಡಿ ಗುತ್ತು, ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರೂ ಆದ ಮನಮೋಹನ ರೈ ಚೆಲ್ಯಡ್ಕ, ಶ್ರೀಗಣೇಶೋತ್ಸವ ಸಮಿತಿ ಅಧ್ಯಕ್ಷ ಮಹೇಶ್ ಕೋರ್ಮಂಡ, ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ಕಕ್ಕೂರು, ಕೋಶಾಧಿಕಾರಿ ಜಗದೀಶ ಗೌಡ ಪಾರ, ಸಂಚಾಲಕ ಡಾ.ಸುಬ್ರಹ್ಮಣ್ಯ ವಾಗ್ಲೆ ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಇನ್ನಷ್ಟು ಓದಿ

Bettampady Ganeshotsava 2026

41ನೇ ವರ್ಷದ ಬೆಟ್ಟಂಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮದಿಂದ ಸಂಪನ್ನ

ವಿವರವಾಗಿ ಓದಿ

harinarayana manolithaya donation bettampady temple

ಶ್ರೀ ಕ್ಷೇತ್ರದ ಅಭಿವೃದ್ಧಿ ಹಾಗೂ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಹರಿನಾರಾಯಣ ಮನೊಳಿತ್ತಾಯ ಮತ್ತು ಮಕ್ಕಳು ಬದಿಯಾರು ಇವರಿಂದ ₹20,000 ದೇಣಿಗೆ

ವಿವರವಾಗಿ ಓದಿ

ganeshotsava samiti donation bettampady temple

ಶ್ರೀ ಕ್ಷೇತ್ರದ ಅಭಿವೃದ್ಧಿ ಹಾಗೂ ಬ್ರಹ್ಮಕಲಶೋತ್ಸವಕ್ಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ₹1,11,111 ದೇಣಿಗೆ

ವಿವರವಾಗಿ ಓದಿ